ಅಗ್ನಿಸಾಕ್ಷಿ, ಬಿಗ್ ಬಾಸ್ ಖ್ಯಾತಿಯ ವೈಷ್ಣವಿ ಗೌಡ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗ್ರ್ಯಾಂಡ್ ಆಗಿ ನಟಿ ನಿಶ್ಚಿತಾರ್ಥ ಮಾಡಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ.
ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ಮದುವೆಯಾಗುತ್ತಿರೋ ವರ ಅನುಕೂಲ್ ಮಿಶ್ರಾ ಅವರು ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಪೋಷಕರು ಮೆಚ್ಚಿದ ವರನೊಂದಿಗೆ ಖುಷಿಯಿಂದ ಹಸೆಮಣೆ ಏರಲು ನಟಿ ರೆಡಿಯಾಗಿದ್ದಾರೆ.
ಸದ್ಯ ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡ ವೈಷ್ಣವಿ ಅವರು, ಅವನದ್ದು ಆಕಾಶ ಸೇವೆ, ನನ್ನದು ಸ್ಕ್ರೀಪ್ಟ್ ಹಾಗೂ ವೇದಿಕೆ. ವಿಧಿ ಒಂದು ಸುಂದರ ಲವ್‌ಸ್ಟೋರಿ ಹೆಣೆದಿದೆ ಎಂದು ಬರೆದುಕೊಂಡಿದ್ದಾರೆ.