ಭೂಮಿಯ ಮೇಲಿನ ಸ್ವರ್ಗ ಎಂದೇ ಕರೆಯಲಾಗುವ ಕಾಶ್ಮೀರದಲ್ಲಿ ಅತ್ಯದ್ಭುತ ಪ್ರವಾಸಿ ತಾಣಗಳಿವೆ. ನವ ಜೋಡಿಗಳ ಹನಿಮೂನ್ ಗೆ ಕಾಶ್ಮೀರ ಹೇಳಿ ಮಾಡಿಸಿದ ಜಾಗ ಅಂತಾನೇ ಹೇಳಬಹುದು. ಹಿಮದಿಂದ ಆವೃತವಾದ ಪರ್ವತಗಳು, ಸುಂದರ ಕಣಿವೆಗಳು ಬೆಟ್ಟಗುಡ್ಡಗಳು ಸೇರಿದಂತೆ ಇಲ್ಲಿ ಕಣ್ತುಂಬಿಕೊಳ್ಳಬಹುದಾದ ಹಲವು ತಾಣಗಳಿವೆ. ಇಲ್ಲಿನ ಪಹಲ್ಗಾಮ್, ಗುಲ್ಮಾರ್ಗ್, ಸೋನಾಮಾರ್ಗ್ ಇತ್ಯಾದಿ ಸ್ಥಳಗಳಿಗೆ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಕಾಶ್ಮೀರಕ್ಕೆ ಹೋಗುವ ಪ್ರವಾಸಿಗರು ಇಲ್ಲಿನ ಅತ್ಯಂತ ಸುಂದರ ತಾಣಗಳಲ್ಲಿ ಒಂದಾದ, ಭಾರತದ ಮಿನಿ ಸ್ವಿಟ್ಜರ್ ಲ್ಯಾಂಡ್ ಅಂತಾನೇ ಕರೆಯುವ ಪಹಲ್ಗಾಮ್ ಗೆ ತಪ್ಪದೆ ಭೇಟಿ ನೀಡುತ್ತಾರೆ. ಸಮುದ್ರ ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಅತ್ತ ಒಂದು ಕಡೆ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರ ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ಇತ್ತ ದೇಶದ ಪ್ರಮುಖ ನಾಯಕರು ಉಗ್ರರ ದಾಳಿಗೆ ಪ್ರತೀಕಾರ ತೀರಿಸುವ ಬಗ್ಗೆ ಸಭೆ ನಡೆಸಲು ಮುಂದಾಗಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ ಪಹಲ್ಗಾಮ್ ದಾಳಿಕೋರರ ಮಾಹಿತಿಯನ್ನು ರಿಲೀಸ್ ಮಾಡಿದ್ದು, ಉಗ್ರರ ಫೋಟೋ ಕೂಡಾ ಬಹಿರಂಗಪಡಿಸಿದ್ದಾರೆ. ಇದೀಗ ಪೊಲೀಸ್ ಇಲಾಖೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಒಂದು ವೇಳೆ ಭಯೋತ್ಪಾದಕರ ನಿಖರ ಮಾಹಿತಿ ನೀಡಿದ್ರೆ 20 ಲಕ್ಷ ಬಹುಮಾನ ...
ಭಯೋತ್ಪಾದಕರು 27 ನಾಗರಿಕರನ್ನು ಗುಂಡಿಕ್ಕಿ ಕೊಂದ ನಂತರ ಕಾಶ್ಮೀರ ಕಣಿವೆಯಲ್ಲಿ ರಕ್ತದೋಕುಳಿಯಾಗಿದೆ. ಹಸಿರಾಗಿದ್ದ ಕಣಿವೆ ಕೆಂಪು ಬಣ್ಣಕ್ಕೆ ತಿರುಗಿದೆ. ಇದೀಗ ಬಾಲಿವುಡ್ ನಟ ಶಾರುಖ್ ಖಾನ್ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಬೆಂಬಲಕ್ಕೆ ನಿಂತಿರುವ ಶಾರುಖ್ ಖಾನ್, ಅಗತ್ಯವಿರುವ ಸಮಯದಲ್ಲಿ ಒಗ್ಗಟ್ಟಿನಿಂದ ನಿಲ್ಲುವಂತೆ ಒತ್ತಾಯಿಸಿದರು. “ಪಹಲ್ಗಾಮ್ ನಲ್ಲಿ ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು. ಇಂತಹ ಸಮಯದಲ್ಲಿ, ದೇವರ ಕಡೆಗೆ ತಿರುಗಿ ಸಂತ್ರಸ್ತ ಕುಟುಂಬಗಳಿಗಾಗಿ ಪ್ರಾರ್ಥನೆ ...
ಇಂದೋರ್ : ಮಧ್ಯಪ್ರದೇಶದ ಇಂದೋರ್ ನಲ್ಲಿ ಬಹಳ ದಿನಗಳ ನಂತರ ಕೊರೊನಾ ಮಾರಣಾಂತಿಕ ರೋಗ ಮತ್ತೆ ಕಂಡುಬಂದಿದೆ. ಒಬ್ಬರಲ್ಲ, ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಕೇಸ್ ಬೆಳಕಿಗೆ ಬಂದಿದೆ. ಅಲ್ಲದೇ ಚಿಕಿತ್ಸೆ ಸಮಯದಲ್ಲಿ ಒಬ್ಬ ಮಹಿಳೆ ಸಾವನಪ್ಪಿದ್ದಾರೆ ಮತ್ತು ಇನ್ನೊಬ್ಬ ಕೊರೊನಾ ಪಾಸಿಟಿವ್ ಬಂದ ಯುವಕನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಇದು ದೊಡ್ಡ ಕೋಲಾಹಲ ಸೃಷ್ಟಿ ಮಾಡಿದ್ದು, ಜನರು ಮತ್ತೆ ಆತಂಕಗೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಕೊರೊನಾವೈರಸ್ ಮತ್ತೊಮ್ಮೆ ಅಪ್ಪಳಿಸಿದೆ. ಇಂದೋರ್ ನ ಖಾಸಗಿ ಆಸ್ಪತ್ರೆಗೆ ಮಹಿಳೆಯೊಬ್ಬರು ಹೊಟ್ಟೆ ನೋವಿನಿಂದ ದಾಖಲಾಗಿದ್ದರು. ಅವರು ಮೂತ್ರಪಿಂಡ ಸಂಬಂಧಿತ ಕಾಯಿಲೆಗೆ ...
‘ಭಾಬಿಜಿ ಘರ್ ಪರ್ ಹೈ’ ಸೀರಿಯಲ್ ಖ್ಯಾತಿಯ ಶುಭಾಂಗಿ ಅತ್ರೆ ಅವರಿಂದ ಡಿವೋರ್ಸ್ ಪಡೆದ 2 ತಿಂಗಳಲ್ಲೇ ಮಾಜಿ ಪತಿ ಪಿಯೂಷ್ ಪೊರೆ ವಿಧಿವಶರಾಗಿದ್ದಾರೆ. ನಟಿ ಶುಭಾಂಗಿ ಅವರ ಮಾಜಿ ಪತಿ ಪಿಯೂಷ್ ಅವರು ಲಿವರ್ ಸಿರೋಸಿಸ್ ಕಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಅವರು ಏ.19ರಂದು ನಿಧನರಾಗಿದ್ದಾರೆ. ಮಾಜಿ ಪತಿಯ ನಿಧನದ ಕುರಿತು ನಟಿ ಪ್ರತಿಕ್ರಿಯಿಸಿ, ಈ ವಿಚಾರದ ಬಗ್ಗೆ ಮಾತನಾಡಲು ಸ್ವಲ್ಪ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಪಿಯೂಷ್ ಡಿಜಿಟಲ್ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದರು. 2003ರಲ್ಲಿ ಪಿಯೂಷ್ ...
25 ವರ್ಷಗಳ ಹಿಂದೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಅಂಧ ಮಗುವೊಂದು ಕಸದ ಬುಟ್ಟಿಯಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಮಗುವನ್ನು ರಕ್ಷಿಸಿ ಸುಧಾರಣಾ ಗೃಹಕ್ಕೆ ಕರೆದ್ಯೊಯಿದಿದ್ದಾರೆ. ಈಗ ಇದೇ ಮಗು ಬೆಳೆದು ದೊಡ್ಡವಳಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದು, ನಾಗ್ಪುರ ಕಲೆಕ್ಟರ್ ಕಚೇರಿಯಲ್ಲಿ ಕೆಲಸ ಮಾಡಿದ್ದಾಳೆ. ಇತ್ತೀಚೆಗೆ ಅವರಿಗೆ ನೇಮಕಾತಿ ಪತ್ರ ಸಿಕ್ಕಿದೆ. ಆ ಯುವತಿಯ ಹೆಸರೇ ಮಾಲಾ ಪಾಪಲ್ಕರ್. ಮಾಲಾ ನಾಗ್ಪುರ ಕಲೆಕ್ಟರೇಟ್ ನಲ್ಲಿ ತನ್ನ ಮೊದಲ ಹುದ್ದೆಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾಳೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸಾರ್ವಜನಿಕ ...
ನವದೆಹಲಿ: ಅಮೆರಿಕ-ಚೀನಾ ವ್ಯಾಪಾರ ಸಮರ ನಡೆಯುತ್ತಿರುವ ಹೊತ್ತಲ್ಲೇ 10 ಗ್ರಾಂ ಚಿನ್ನದ ಬೆಲೆ (Gold Rate) 1 ಲಕ್ಷ ರೂ. ದಾಟಿ ಸಾರ್ವಕಾಲಿಕ ದಾಖಲೆ ಬರೆದಿದೆ. ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಮಂಗಳವಾರ 1 ಗ್ರಾಂಗೆ 10,135 ರೂ. ತಲುಪಿದ್ದು, 10 ಗ್ರಾಂಗೆ 1,01,135 ರೂ.ಗೆ ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ...
ಬರೇಲಿ: ಬಾಲಿವುಡ್ ನಟಿ ದಿಶಾ ಪಟಾನಿ ಅವರ ಸಹೋದರಿ ಖುಷ್ಬೂ ಪಟಾನಿ ರವಿವಾರ ಬೆಳಿಗ್ಗೆ ಉತ್ತರ ಪ್ರದೇಶದ ಬರೇಲಿಯಲ್ಲಿ ಪಾಳುಬಿದ್ದ ಕಟ್ಟಡದಿಂದ ಸುಮಾರು 9 ರಿಂದ 10 ತಿಂಗಳ ವಯಸ್ಸಿನ ಅನಾಥ ಶಿಶುವನ್ನು ಗೋಡೆ ಹತ್ತಿ ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Khushboo patani ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಖುಷ್ಬೂ ಪಟಾನಿಯವರು ಪಾಳು ಬಿದ್ದ ಕಟ್ಟಡವನ್ನು ಪ್ರವೇಶಿಸಿದ ವೇಳೆ ಒಂಬತ್ತರಿಂದ ಹತ್ತು ತಿಂಗಳ ಹೆಣ್ಣು ಮಗುವೊಂದು ಕೊಳಕಿನಲ್ಲಿ ಬಿದ್ದು ಅಳುತ್ತಿರುವುನ್ನು ಕಾಣಬಹುದು. ಆ ತಕ್ಷಣವೇ ಅದನ್ನು ಎತ್ತಿಕೊಂಡು ...
ರಶ್ಮಿಕಾ ಮಂದಣ್ಣ ಅವರ ಹೊಸ ಫೋಟೋಗಳು ವೈರಲ್ ಆಗಿವೆ. ಈ ಫೋಟೋದಲ್ಲಿ ಅವರು ಗುಲಾಬಿ ಹೂವು ಹಿಡಿದು ನಿಂತಿದ್ದಾರೆ. ಗುಲಾಬಿ ಹೂವನ್ನು ಹುಡುಗಿಯರು ಹಿಡಿದು ನಿಂತಿದ್ದಾರೆ ಎಂದಾದರೆ ಅದನ್ನು ಯಾರೋ ಕೊಟ್ಟಿರುತ್ತಾರೆ ಎಂಬ ಅನುಮಾನ ಮೂಡೋದು ಸಹಜ. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಗುಲಾಬಿ ಹೂವು ಕೊಟ್ಟಿದ್ದು ಬೇರೆ ಯಾರೋ ಅಲ್ಲ. ಅವರೇ ಗುಲಾಬಿ ಹೂವು ಖರೀದಿಸಿದ್ದಾರೆ. ತಮಗೆ ತಾವೇ ಗಿಫ್ಟ್ ಕೊಟ್ಟುಕೊಂಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಅವರ ಮಾತು ಅನೇಕರಿಗೆ ಇಷ್ಟ ಆಗಿದೆ. ‘ಕೊನೆಯ ...
ಬೆಂಗಳೂರು: ದೇಶದ ಪ್ರಮುಖ ದೂರಸಂಪರ್ಕ ಕಂಪನಿಗಳಾದ ಜಿಯೋ, ಏರ್ ಟೆಲ್ ಮತ್ತು ವೊಡಾಫೋನ್ ಐಡಿಯಾ ಈ ವರ್ಷಾಂತ್ಯದ ವೇಳೆಗೆ ತಮ್ಮ ಸುಂಕಗಳನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವರದಿಯಾಗಿದೆ. ಪ್ರಿಪೇಯ್ಡ್ ಮೊಬೈಲ್ ರೀಚಾರ್ಜ್ ಗಳು ಮಾತ್ರವಲ್ಲ, ಪೋಸ್ಟ್ ಪೇಯ್ಡ್ ಮೊಬೈಲ್ ರೀಚಾರ್ಜ್ ಗಳು ಸಹ ದುಬಾರಿಯಾಗಬಹುದು. ಇದರರ್ಥ ನಿಮ್ಮ ಮೊಬೈಲ್ ಸಂಖ್ಯೆಯನ್ನು ಸಕ್ರಿಯವಾಗಿಡಲು ನೀವು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಕರೆ, ಇಂಟರ್ನೆಟ್ ಮತ್ತು SMS ಗಾಗಿ ನೀವು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಇದು ಸಾಮಾನ್ಯ ಜನರು ಮತ್ತು ಬಡ ಜನರ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ ...
Follow Me