ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಕೂಡ ನಡೆದಿದೆ. ಸದ್ಯ ಈ ಎರಡು ಘಟನೆಗಳಿಂದು ಏರ್ಪೋರ್ಟ್ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?ಘಟನೆ ಬಗ್ಗೆ ಕೆಂಪೇಗೌಡ ಏರ್ಪೋರ್ಟ್ ...
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಕೇಶ್ ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಿಕ್ಕಿ ರೈ ಮೇಲೆ 2 ಬಾರಿ ಗುಂಡಿನ ...
ಮಂಗಳೂರು: ನಿನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಲ್ಕಿ ನಿವಾಸಿ ಪ್ರಭುರಾಜ್ (38), ಕುಂಪಲ ನಿವಾಸಿ ಮಿಥುನ್ (30) ಮತ್ತು ಮಣಿ ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, “ನಿನ್ನೆ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ 112ಗೆ ಕರೆ ಬಂದಿತ್ತು. ಕರೆ ಮಾಡಿದವರು ಹುಡುಗಿಯೊಬ್ಬಳು ಕೂಗಾಡುತ್ತಿದ್ದು, ಆಕೆಗೆ ಹಲ್ಲೆ ಮಾಡಲಾಗಿದೆ ...
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇ ಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ...
‘ಬಿಗ್ ಬಾಸ್’ (Bigg Boss Kannada 10) ಖ್ಯಾತಿಯ ನಮ್ರತಾ ಗೌಡ ಅವರು 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಬರ್ತ್‌ಡೇಯನ್ನು ರಕ್ಷಕ್ ಮತ್ತಷ್ಟು ಸ್ಪೆಷಲ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಅವರು ಕೊಟ್ಟಿರುವ ಬರ್ತ್‌ಡೇ ಸರ್ಪ್ರೈಸ್‌ಗೆ ನಮ್ರತಾ ಭಾವುಕರಾಗಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ನಮ್ರತಾ ಗೌಡ ಹುಟ್ಟುಹಬ್ಬದ (ಏ.14) ಹಿನ್ನೆಲೆ ಸರ್ಪ್ರೈಸ್ ಆಗಿ ರಕ್ಷಕ್ ಮನೆಗೆ ಕರೆದುಕೊಂಡು ಹೋಗಿ ನಟಿಯ ಕೈಯಲ್ಲಿ ಕೇಕ್ ಕಟ್ ಮಾಡಿಸಿದ್ದಾರೆ. ಬರ್ತ್‌ಡೇಗೆ ಅಲಂಕರಿಸಿರುವ ರೀತಿ ಹಾಗೂ ಸಹೋದರ ರಕ್ಷಕ್ ಪ್ರೀತಿ ನೋಡಿ ನಮ್ರತಾ ಕಣ್ಣೀರಿಟ್ಟಿದ್ದಾರೆ. ...
ಬೆಂಗಳೂರು: ‘ಇಂಡಿಯಾ ಜಸ್ಟೀಸ್ ರಿಪೋರ್ಟ್ 2025’ ಬಿಡುಗಡೆಯಾಗಿದ್ದು, ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ದಕ್ಷಿಣದ ರಾಜ್ಯಗಳೇ ಮುಂಚೂಣಿಯಲ್ಲಿದ್ದು, ಉತ್ತರದ ರಾಜ್ಯಗಳು ಕಳಪೆ ಪ್ರದರ್ಶನ ತೋರಿವೆ. ನ್ಯಾಯ ಒದಗಿಸುವ ಸಾಮರ್ಥ್ಯದ ವಾರ್ಷಿಕ ಶ್ರೇಯಾಂಕದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮೊದಲ ಮೂರು ಸ್ಥಾನಗಳನ್ನು ಪಡೆದುಕೊಂಡಿವೆ. ಈ ರಾಜ್ಯಗಳ ಕಾರ್ಯಕ್ಷಮತೆಯಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿರುವುದಾಗಿ ‘ಇಂಡಿಯಾ ಜಸ್ಟೀಸ್ ರಿಪೋರ್ಟ್ 2025’ ಉಲ್ಲೇಖಿಸಿದೆ. 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ (ತಲಾ ಒಂದು ಕೋಟಿಗಿಂತ ಹೆಚ್ಚಿನ ಜನಸಂಖ್ಯೆಯೊಂದಿಗೆ) ಕರ್ನಾಟಕಕ್ಕೆ ಮೊದಲ ...
ಅಗ್ನಿಸಾಕ್ಷಿ, ಬಿಗ್ ಬಾಸ್ ಖ್ಯಾತಿಯ ವೈಷ್ಣವಿ ಗೌಡ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗ್ರ್ಯಾಂಡ್ ಆಗಿ ನಟಿ ನಿಶ್ಚಿತಾರ್ಥ ಮಾಡಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ. ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ಮದುವೆಯಾಗುತ್ತಿರೋ ವರ ಅನುಕೂಲ್ ಮಿಶ್ರಾ ಅವರು ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಪೋಷಕರು ಮೆಚ್ಚಿದ ವರನೊಂದಿಗೆ ಖುಷಿಯಿಂದ ಹಸೆಮಣೆ ಏರಲು ನಟಿ ರೆಡಿಯಾಗಿದ್ದಾರೆ. ಸದ್ಯ ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡ ವೈಷ್ಣವಿ ಅವರು, ಅವನದ್ದು ಆಕಾಶ ಸೇವೆ, ನನ್ನದು ಸ್ಕ್ರೀಪ್ಟ್ ಹಾಗೂ ...
ಬೆಂಗಳೂರು: ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಕರ್ನಾಟಕ ವಿಧಾನಸಭೆ ಶುಕ್ರವಾರ ಅಂಗೀಕರಿಸಿದೆ. ಇತರ ಹಿಂದುಳಿದ ವರ್ಗಗಳ (ಒಬಿಸಿ) ಪ್ರವರ್ಗ -2 ಬಿ ಅಡಿಯಲ್ಲಿ ವರ್ಗೀಕರಿಸಲಾದ ಮುಸ್ಲಿಮರಿಗೆ ಶೇಕಡಾ 4 ರಷ್ಟು ಕೋಟಾದೊಂದಿಗೆ ಮೀಸಲಾತಿ ನೀಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಮಸೂದೆಗೆ ಕಳೆದ ವಾರ ಸಚಿವ ಸಂಪುಟ ಅನುಮೋದನೆ ನೀಡಿತ್ತು. “ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಮಸೂದೆ (ಕೆಟಿಪಿಪಿ) ಅನ್ನು ಇಂದು ರಾಜ್ಯ ವಿಧಾನಸಭೆಯಲ್ಲಿ ತಿದ್ದುಪಡಿಯೊಂದಿಗೆ ಅಂಗೀಕರಿಸಲಾಗಿದೆ. ಇದರರ್ಥ ಇಂದಿನಿಂದ, ಕರ್ನಾಟಕದಲ್ಲಿ ಶೇಕಡಾ 4 ರಷ್ಟು ಸರ್ಕಾರಿ ಗುತ್ತಿಗೆಗಳನ್ನು ...
ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮತ್ತು ಆ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಅಕ್ಟೋಬರ್-2024ರ ಮಾಹೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಸೂಕ್ತ ಕ್ರಮಗಳನ್ನು ಜರುಗಿಸಲಾಗಿರುತ್ತದೆ. ಮಾಧ್ಯಮಗಳಲ್ಲಿ ಚೀನಾ ದೇಶದಿಂದ ಸರಬರಾಜಾಗುತ್ತಿರುವುದಾಗಿ ಹೇಳಲಾದ ಕೃತಕ/ನಿಷೇಧಿತ ಬೆಳ್ಳುಳ್ಳಿಯು ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಬಗ್ಗೆ ಪ್ರಚಾರವಾಗುತ್ತಿದ್ದ ಹಿನ್ನೆಲೆಯಲ್ಲಿ ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ರಾಜ್ಯಾದ್ಯಂತ 154 ಬೆಳ್ಳುಳ್ಳಿ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಅವುಗಳಲ್ಲಿ 147 ಮಾದರಿಗಳು ಸುರಕ್ಷಿತ ಎಂದು. 07 ...
Follow Me